ಹಸುರು’ ಕವನವು ಆಶ್ವಯುಜ ಮಾಸದ ನವರಾತ್ರಿಯಲ್ಲಿ ಪ್ರಕೃತಿಯಲ್ಲಿ ಹೆಪ್ಪುಗಟ್ಟಿದ ಹಚ್ಚ ಹಸುರನ್ನು ಕಂಡು ಪ್ರೇರಿತವಾದ ಕವನವಾಗಿದೆ. ಇದು ಕುವೆಂಪು ಅವರ ಸ್ಥಳವಾದ ಮಲೆನಾಡಿನ ಕುಪ್ಪಳ್ಳಿಯ ’ಕವಿಶೈಲ’ದಲ್ಲಿ ಅವರಿಗುಂಟಾದ ಸೌಂದರ್ಯಾನುಭವ. ಪ್ರಕೃತಿ, ಅಲ್ಲಿಯ ಹಸುರುಗಳೊಂದಿಗೆ ಕುವೆಂಪು ಹೊಂದಿದ್ದ ಸಮೀಪ ಸಂಬಂಧವನ್ನು ತೋರಿಸುತ್ತದೆ.
ಕವಿಯಾತ್ಮವು ಹಸುರುಗಟ್ಟಲು ಆಶ್ವಯುಜ ಮಾಸದ ನವರಾತ್ರಿಯ ದಿನದಲ್ಲ್ಲಿ ಹೊಸ ಚಿಗುರಿನಿಂದ ಕೂಡಿದ ಭೂಮಿಯಲ್ಲಿ ವಿಶಾಲವಾದ ಶಾಮಲ ಕಡಲು ಹಸುರಾಗಿರುವುದನ್ನು ನೋಡಿ ಕವಿಯ ಆತ್ಮವನ್ನು ರಸಪಾನದಲ್ಲಿ ಮಿಂದಿತು. ಆಗಸದಲ್ಲಿ; ಮುಗಿಲಿನಲ್ಲಿ; ಗದ್ದೆಯ ಬಯಲಿನಲ್ಲಿ; ಬೆಟ್ಟಗುಡ್ಡಗಳಲ್ಲಿ; ಕಣಿವೆಯಲ್ಲಿ; ಸಂಜೆಯ ಬಿಸಿಲಿನಲ್ಲಿ ಹಸುರು ಹರಡಿತ್ತು. ಹಾಗೆಯೇ ಅಶ್ವೀಜ ಮಾಸದಲ್ಲಿ ಬತ್ತದ ಗದ್ದೆಗೆ ಮುತ್ತುವ ಗಿಳಿಗಳ ಹಸುರು ಬಣ್ಣದ ನೋಟ; ಅದರ ಪಕ್ಕದಲ್ಲೇ ಕಾಡಂಚಿನಲ್ಲಿ ಫಲಭರಿತ ಅಡಕೆಯ ತೋಟ; ಹುಲ್ಲಿನ ಮಕಮಲ್ಲಿನ ಹೊಸಪಚ್ಚೆಯ ಜಮಖಾನೆ ಹರಡಿದಂತೆ ಭೂಮಿಯು ಹಸುರಿನಿಂದ ಮೈ ಮುಚ್ಚಿರಲು ಕವಿಗೆ ಬೇರೆ ಬಣ್ಣಗಳೇ ಕಾಣದಾದವು. ಹೊಸ ಹೂವಿನ ಕಂಪು; ತಂಗಾಳಿಯ ತಂಪು; ಹಕ್ಕಿಯ ಇಂಪಾದ ಗಾನ; ಅತ್ತ-ಇತ್ತ-ಎತ್ತ ನೋಡಿದರೂ ಹಸುರು.. ಹಸುರು.. ಹಸರು.. ಇದನ್ನು ನೋಡಿದ ಕವಿಯಾತ್ಮವು ಹಸುರುಗಟ್ಟಿತು. ಕವಿಯ ದೇಹದಲ್ಲೂ ಹಸುರು ರಕ್ತವೇ ಹರಿದಾಡಿತು. ಎಂದು ಹಸುರು ವ್ಯಾಪಿಸಿದ ಬಗೆಯನ್ನು ಕವಿ ಕುವೆಂಪು ಅವರು ವರ್ಣಿಸಿದ್ದಾರೆ.

No comments:
Post a Comment